Skip Ribbon Commands
Skip to main content
nglish
Sign In

ಹೈದರಾಬಾದ್ ಕರ್ನಾಟಕ ವಿಶೇಷ ಘಟಕ


ಭಾರತದ ಸಂವಿಧಾನಕ್ಕೆ ಅನುಚ್ಛೇದ 371ಜೆ ಯನ್ನು ಸೇರ್ಪಡೆಗೊಳಿಸಿ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಇದರಿಂದ ಪ್ರಾದೇಶಿಕ ಅಸಮತೋಲನೆಯನ್ನು ತೊಡೆದುಹಾಕಲು ಅನುಕೂಲವಾಗಿದ್ದು, ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿ, ಸಾರ್ವಜನಿಕ ಉದ್ಯೋಗದಲ್ಲಿ ಮೀಸಲಾತಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿಯಲ್ಲಿ ಮೀಸಲಾತಿಗೆ ಒತ್ತು ನೀಡಲಾಗಿರುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013 ಮತ್ತು ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಪ್ರವೇಶ ನಿಯಂತ್ರಣ) ಆದೇಶ, 2013 ಹಾಗೂ ಕರ್ನಾಟಕ ಖಾಸಗಿ ಅನುದಾನರಹಿತ ಶೈಕ್ಷಣಿಕ ಸಂಸ್ಥೆಗಳ (ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಪ್ರವೇಶ ನಿಯಂತ್ರಣ ಆದೇಶ, 2013 ಗಳನ್ನು ಹೊರಡಿಸಲಾಗಿದ್ದು ಇದರಿಂದ ಹೈದರಾಬಾದ್ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಸಾರ್ವಜನಿಕ ಉದ್ಯೋಗ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗಿದೆ ಹಾಗೂ ಉದ್ಯೋಗ ಪಡೆಯಲು ಸ್ಥಳೀಯ ವ್ಯಕ್ತಿಗಳ ಸಾಮರ್ಥ್ಯ ಬೆಳೆಸಲು ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿಯಲ್ಲಿ ಮೀಸಲಾತಿಯನ್ನು ನಿಗಧಿಪಡಿಸಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಅನುಚ್ಛೇದ 371ಜೆ ಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ಹಾಗೂ ಈ ನಿಟ್ಟಿನಲ್ಲಿ ಘನತೆವೆತ್ತ ರಾಜ್ಯಪಾಲರು ಹೊರಡಿಸಬಹುದಾದ ವಿವಿಧ ಆದೇಶಗಳನ್ನು ಅಂತಿಮಗೊಳಿಸಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿರುತ್ತದೆ.    

Last modified at 19-09-2018 12:21 by System Account

Content Owned and Maintained by : Department of Personnel and Administrative Reforms, Government of Karnataka

Disclaimer: Please note that this page also provides links to the websites / web pages of Govt. Ministries/Departments/Organisations. The content of these websites are owned by the respective organisations and they may be contacted for any further information or suggestion

Designed and Developed by: Center for e-Governance Government of Karnataka

©2016, All Rights Reserved.