ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

 

ಹೈದರಾಬಾದ್ ಕರ್ನಾಟಕ ವಿಶೇಷ ಕೋಶ

ಭಾರತದ ಸಂವಿಧಾನಕ್ಕೆ ಅನುಚ್ಛೇದ 371ಜೆ ಯನ್ನು ಸೇರ್ಪಡೆಗೊಳಿಸಿ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಇದರಿಂದ ಪ್ರಾದೇಶಿಕ ಅಸಮತೋಲನೆಯನ್ನು ತೊಡೆದುಹಾಕಲು ಅನುಕೂಲವಾಗಿದ್ದು, ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿ, ಸಾರ್ವಜನಿಕ ಉದ್ಯೋಗದಲ್ಲಿ ಮೀಸಲಾತಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿಯಲ್ಲಿ ಮೀಸಲಾತಿಗೆ ಒತ್ತು ನೀಡಲಾಗಿರುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013 ಮತ್ತು ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಪ್ರವೇಶ ನಿಯಂತ್ರಣ) ಆದೇಶ, 2013 ಹಾಗೂ ಕರ್ನಾಟಕ ಖಾಸಗಿ ಅನುದಾನರಹಿತ ಶೈಕ್ಷಣಿಕ ಸಂಸ್ಥೆಗಳ (ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಪ್ರವೇಶ ನಿಯಂತ್ರಣ ಆದೇಶ, 2013 ಗಳನ್ನು ಹೊರಡಿಸಲಾಗಿದ್ದು ಇದರಿಂದ ಹೈದರಾಬಾದ್ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಸಾರ್ವಜನಿಕ ಉದ್ಯೋಗ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗಿದೆ ಹಾಗೂ ಉದ್ಯೋಗ ಪಡೆಯಲು ಸ್ಥಳೀಯ ವ್ಯಕ್ತಿಗಳ ಸಾಮರ್ಥ್ಯ ಬೆಳೆಸಲು ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿಯಲ್ಲಿ ಮೀಸಲಾತಿಯನ್ನು ನಿಗಧಿಪಡಿಸಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಅನುಚ್ಛೇದ 371ಜೆ ಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ಹಾಗೂ ಈ ನಿಟ್ಟಿನಲ್ಲಿ ಘನತೆವೆತ್ತ ರಾಜ್ಯಪಾಲರು ಹೊರಡಿಸಬಹುದಾದ ವಿವಿಧ ಆದೇಶಗಳನ್ನು ಅಂತಿಮಗೊಳಿಸಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿರುತ್ತದೆ.  ಹೈದ್ರಾಬಾದ್‌-ಕರ್ನಾಟಕ ವಿಭಾಗದಲ್ಲಿ ಬರುವ ಆರು ಜಿಲ್ಲೆಗಳಾದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಈ ಜಿಲ್ಲೆಗಳ ಸರ್ವೋತೋಮುಖ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಲಾಗುತ್ತದೆ.  

 

ಇತ್ತೀಚಿನ ನವೀಕರಣ​ : 28-10-2020 03:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ - ಹೈದರಾಬಾದ್-ಕರ್ನಾಟಕ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080