ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಸೇವಾ ನಿಯಮಗಳು ವಿಭಾಗವು ಕೇವಲ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ  ಮಾತ್ರವಲ್ಲದೆ ಸರ್ಕಾರದ ಎಲ್ಲಾ ಇಲಾಖೆಗಳಿಗೆ ಮಹತ್ವವನ್ನು ಹೊಂದಿರುವ ವಿಭಾಗವಾಗಿದೆ. ರಾಜ್ಯ ಸರ್ಕಾರಿ ನೌಕರರ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಇರುವ ಹೆಚ್ಚಿನ ಎಲ್ಲಾ ಅಧಿನಿಯಮ, ನಿಯಮಗಳ ಮೂಲ ಭಂಡಾರ ಇದಾಗಿದೆ. ರಾಜ್ಯ ಸರ್ಕಾರಿ ನೌಕರರ ಕರ್ತವ್ಯ ನಿರ್ವಹಣೆಯಲ್ಲಿ ಕಾಲಕಾಲಕ್ಕೆ ಎದುರಾಗುವ ಸವಾಲುಗಳನ್ನು ಗಮನದಲ್ಲಿ ಇರಿಸಿಕೊಂಡು ನೂತನ ಅಧಿನಿಯಮ ಮತ್ತು ನಿಯಮಗಳನ್ನು ರಚಿಸುವ ಅಥವಾ ಈಗಾಗಲೇ ಚಾಲ್ತಿಯಲ್ಲಿರುವ ಅಧಿನಿಯಮ ಮತ್ತು ನಿಯಮಗಳಿಗೆ ಮಹತ್ವದ ತಿದ್ದುಪಡಿಗಳನ್ನು ತರುವ ಜವಾಬ್ದಾರಿ ಈ ವಿಭಾಗದ್ದಾಗಿದೆ.

ಮುಂದುವರೆದು, ವಿವಿಧ ಇಲಾಖೆಗಳಲ್ಲಿನ ಅಧಿಕಾರಿ ನೌಕರರಿಗೆ ಈ  ಅಧಿನಿಯಮ, ನಿಯಮಗಳ ಜಾರಿಗೊಳಿಸುವಿಕೆಯಲ್ಲಿ ಅನುಕೂಲವಾಗಲೆಂದು ಹೆಚ್ಚಿನ ವಿವರಗಳನ್ನು ಒಳಗೊಂಡ ಅಧಿಸೂಚನೆ, ಸರ್ಕಾರದ ಆದೇಶಗಳು, ಅಧಿಕೃತ ಜ್ಞಾಪನಗಳು ಮತ್ತು ಸುತ್ತೋಲೆಗಳನ್ನು ಅಗತ್ಯದ ಅನುಸಾರ ಹೊರಡಿಸಲಾಗುತ್ತದೆ. ಸೇವಾ ವಿಷಯಗಳನ್ನು ಜಾರಿಗೊಳಿಸುವಲ್ಲಿ ಇಲಾಖೆಗಳು ಕೋರುವ ವಿಷಯಗಳಿಗೆ ಸಂಬಂಧಿಸಿದಂತೆ ಅಭಿಪ್ರಾಯವನ್ನೂ ಸಹ ಒದಗಿಸಲಾಗುತ್ತದೆ.

ಇದಲ್ಲದೇ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಗೆ ಸಂಬಂಧಿಸಿದ ಅಧಿನಿಯಮ, ನಿಯಮಗಳನ್ನು ಹಾಗೂ ಸೇವಾ ವಿಷಯಗಳನ್ನು ನಿರ್ವಹಿಸಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಮಹತ್ವದ ಯೋಜನೆಯಾದ ʼಜ್ಯೋತಿ ಸಂಜೀವಿನಿʼ ಮತ್ತು ಸಂಬಂಧಿತ ವಿಷಯಗಳನ್ನು ನಿರ್ವಹಿಸಲಾಗುತ್ತಿದೆ. ಸಚಿವಾಲಯ ಮಟ್ಟದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸುಗಮ ಕೆಲಸ ಕಾರ್ಯಗಳ ನಿರ್ವಹಣೆ ಮತ್ತು ಹಂಚಿಕೆಗೆ ಸಂಬಂಧಿಸಿದಂತೆ ಮಾನ್ಯ ರಾಜ್ಯಪಾಲರು ಸಂವಿಧಾನ ಅನುಚ್ಛೇದ 166ರ ಅಡಿ ರಚಿಸುವ ನಿಯಮಗಳನ್ನೂ ಸಹ ನಿರ್ವಹಿಸಲಾಗುತ್ತಿದೆ.

ಇತ್ತೀಚಿನ ನವೀಕರಣ​ : 29-01-2021 02:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ -ಸೇವಾ ನಿಯಮಗಳು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080