ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಜಾಗೃತ ವಿಭಾಗ)ಯ ವ್ಯಾಪ್ತಿಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಸಂಸ್ಥೆಗಳು ಒಳಪಡುತ್ತವೆ. ಕರ್ನಾಟಕ ಲೋಕಾಯುಕ್ತ ಅಧಿನಿಯಮ, 1984ರಡಿ ಆಡಳಿತ ನಿರ್ವಹಣೆಯಲ್ಲಿ ನಡೆದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮತ್ತು ಅಶಿಸ್ತಿನ ಪ್ರಕರಣಗಳೂ ಸೇರಿದಂತೆ, ಆಡಳಿತ ಕ್ರಮಗಳಲ್ಲಿ ಬಂದ ಫಿರ್ಯಾದುಗಳ ಬಗ್ಗೆ ವಿಚಾರಣೆ ನಡೆಸುವ ಮೂಲಕ, ಸಾರ್ವಜನಿಕ ಆಡಳಿತ ಗುಣಮಟ್ಟವನ್ನು ಸುಧಾರಿಸುವ ಸಲುವಾಗಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ಸ್ಥಾಪಿಸಲಾಗಿರುತ್ತದೆ. ಕರ್ನಾಟಕ ಲೋಕಾಯುಕ್ತ ಅಧಿನಿಯಮವು ಸಾರ್ವಜನಿಕ ನೌಕರರ ವಿರುದ್ಧದ ಭ್ರಷ್ಟಾಚಾರ ಮತ್ತು ದುರಾಡಳಿತಕ್ಕೆ ಸಂಬಂಧಿಸಿದ ಆಪಾದನೆಗಳ ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಮಾಡಲು ಲೋಕಾಯುಕ್ತರಿಗೆ ಅಧಿಕಾರ ನೀಡುತ್ತದೆ.

ರಾಜ್ಯದಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ, 1988ನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಹಾಗೂ ಸ್ವತಂತ್ರವಾಗಿ ತನಿಖೆ ನಡೆಸಲು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 14 ಸೇಲೋಯು 2016, ದಿನಾಂಕ:14.03.2016ರಲ್ಲಿ ಪ್ರತ್ಯೇಕವಾಗಿ ಭ್ರಷ್ಟಾಚಾರ ನಿಗ್ರಹ ದಳವನ್ನು ಸೃಜಿಸಲಾಗಿರುತ್ತದೆ. ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆಡಳಿತಾತ್ಮಕ ಬೆಂಬಲವನ್ನು ನೀಡುವ ಸಲುವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಜಾಗೃತ ವಿಭಾಗವನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 106 ಸಉಸೆ 2016, ದಿನಾಂಕ:26.04.2016ರಲ್ಲಿ ಸೃಜಿಸಲಾಗಿದೆ. ಜಾಗೃತ ವಿಭಾಗವು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೂ ಸಹ ಆಡಳಿತಾತ್ಮಕ ಬೆಂಬಲವನ್ನು ನೀಡಲಿದ್ದು, ಈ ವಿಭಾಗದಲ್ಲಿ ಈ ಎರಡೂ ಸಂಸ್ಥೆಗಳಿಗೆ ಸಂಬಂಧಿಸಿದ ಅಧಿಕಾರಿಗಳ ಸೇವಾ ವಿಷಯಗಳನ್ನು ನಿರ್ವಹಿಸಲಾಗುತ್ತದೆ.

ಇತ್ತೀಚಿನ ನವೀಕರಣ​ : 03-11-2020 11:15 AM ಅನುಮೋದಕರು: superadmin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ -ಜಾಗೃತ ವಿಭಾಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080